ಬಿಬಿಎಂಪಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

ವರ್ಷದಿಂದ ವರ್ಷಕ್ಕೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಮರ್ಪಕ ಮೂಲಸೌಕರ್ಯ ಹಾಗೂ ಶಿಕ್ಷಣ ವ್ಯವಸ್ಥೆ ಇಲ್ಲದಿರುವುದು ಇದಕ್ಕೆ ಕಾರಣ, ಹೀಗಾಗಿ ಬಿಬಿಎಂಪಿ ಶಾಲೆ-ಕಾಲೇಜುಗಳಲ್ಲಿ ಹಾಜರಾತಿ ಹೆಚ್ಚಿಸಲು ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯ ನೀಡಲು ನಿರ್ಧರಿಸಿದೆ. ಈಗಾಗಲೇ ಮಾಮೂಲಿಯಂತೆ ಸಮವಸ್ತ್ರ, ಶೂ, ಸಾಕ್ಸ್, ಪಠ್ಯಪುಸ್ತಕ ನೀಡಲಾಗುತ್ತದೆ. ಅದರ ಜತೆಗೆ ಶಾಲೆ ಮತ್ತು ಕಾಲೇಜುಗಳಿಗೆ ಬಸ್ ಪಾಸ್ ವಿತರಿಸಲು ನಿರ್ಧರಿಸಲಾಗಿತ್ತು, ಪ್ರಸಕ್ತ ಬಜೆಟ್ ನಲ್ಲಿ ಘೋಷಣೆಯಾಗಲಿದೆ.
ಬಿಬಿಎಂಪಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಜತೆಗೆ ಬಸ್ ಪಾಸ್ ನ್ನು ಕೂಡ ನೀಡಲು ಬಿಬಿಎಂಪಿ ಮುಂದಾಗಿದೆ. ಶಿಕ್ಷಣ ಸ್ಥಾಯಿ ಸಮಿತಿ 2018-19 ನೇ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಪಾಸ್ ಉಚಿತವಾಗಿ ನೀಡಲು ನಿರ್ದರಿಸಿದೆ.
ಆಯ್ದ ವಿದ್ಯಾರ್ಥಿಗಳಿಗೆ ಬಸ್ ಪಾಸ್: ಶಿಕ್ಷಣ ಸ್ಥಾಯಿ ಸಮಿತಿ ರೂಪಿಸಿರುವ ಯೋಜನೆಯಂತೆ ಶಾಲೆ ಮತ್ತು ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಲ್ಲಿ ಆಯ್ದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲಾಗುತ್ತದೆ. ಬೇರೆ ಬಡಾವಣೆಗಳಿಂದ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಪಾಸ್ ನೀಡಲಾಗುತ್ತದೆ. ಬಸ್ ಪಾಸ್ ಪಡೆಯಲು ಅರ್ಹ ವಿದ್ಯಾರ್ಥಿಗಳನ್ನು ಗಮನಿಸಿ, ಆಯಾ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಕಾಲೇಜಿನ ಪ್ರಾಂಶುಪಾಲರು ಶಿಕ್ಷಣ ಸ್ಥಾಯಿ ಸಮಿತಿಗೆ ನೀಡಬೇಕಿದೆ. ಆ ಸಂಖ್ಯೆ ಆಧರಿಸಿ ಬಸ್ ಪಾಸ್ ವಿತರಿಸಲು ಹಣ ನಿಗದಿ ಮಾಡಲಾಗುತ್ತದೆ.
Comments