ಆ್ಯಂಬುಲೆನ್ಸ್ ದುರ್ಬಳಕೆ: ಹುಡುಗಿರನ್ನು ಕೂರಿಸಿಕೊಂಡು ಸೈರನ್ ಹಾಕಿ ಸಂಚಾರ
ಮಲ್ಲೇಶ್ವರಂನ ಕುಮಾರ್ ಖಾಸಗಿ ಸಂಸ್ಥೆಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದ್ದು, ಕಾಲೇಜು ವಿದ್ಯಾರ್ಥಿನಿಯರನ್ನು ಕೂರಿಸಿಕೊಂಡ ಆ್ಯಂಬುಲೆನ್ಸ್ ಚಾಲಕ ಸೈರನ್ ಹಾಕಿಕೊಂಡು ಸಂಚರಿಸುತ್ತಿದ್ದ ಎನ್ನಲಾಗಿದೆ.
ಅನುಮಾನಗೊಂಡ ಪೊಲೀಸರು ತಡೆದು ಪರಿಶೀಲಿಸಿದಾಗ ಆ್ಯಂಬುಲೆನ್ಸ್‌ನಲ್ಲಿ ಯಾವುದೇ ರೋಗಿಗಳಿಲ್ಲದೇ ವಿದ್ಯಾರ್ಥಿಗಳಿರುವುದು ಕಂಡುಬಂತು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments