ಬೆಂಗಳೂರು ರಸ್ತೆ ಗುಂಡಿಗೆ ಓರ್ವ ಯುವತಿ ಬಲಿ

ಮೃತ ಯುವತಿ ತನ್ನ ಸ್ನೇಹಿತೆಯ ಜತೆ ದೇವನಹಳ್ಳಿ ಕಡೆಯಿಂದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿನ ಗುಂಡಿಯನ್ನು ತಪ್ಪಿಸಲು ಹೋದ ಯುವತಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಳ್ಳ ತಪ್ಪಿಸಲು ಹೋಗಿ ಸ್ಕೂಟಿಗೆ ಲಾರಿ ಡಿಕ್ಕಿ ಹಿಡೆದ ಪರಿಣಾಮ ಸ್ಥಳದಲ್ಲೇ ಓರ್ವ ಯುವತಿ ಸಾವನ್ನಪ್ಪಿದ್ದು, ಮತ್ತೊರ್ವ ಯುವತಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಶೆಟ್ಟೆರಹಳ್ಳಿ ಗೇಟ್ ಬಳಿ ನಡೆದಿದೆ.
ಕುಂದಾಣ ಗ್ರಾಮ ನಿವಾಸಿ ವೀಣಾ (21) ಮೃತಪಟ್ಟಿರುವ ಯುವತಿ. ಮೃತ ಯುವತಿ ತನ್ನ ಸ್ನೇಹಿತೆಯ ಜತೆ ದೇವನಹಳ್ಳಿ ಕಡೆಯಿಂದ ತಮ್ಮ ಗ್ರಾಮಕ್ಕೆ ತೆರಳುತ್ತಿದರು. ಈ ವೇಳೆ ರಸ್ತೆಯಲ್ಲಿನ ಗುಂಡಿಯನ್ನು ತಪ್ಪಿಸಲು ಹೋದ ಯುವತಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ. ವಿಜಯಲಕ್ಷ್ಮೀ ಎಂಬ ಮತ್ತೊಬ್ಬ ಯುವತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಭವಿಸುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಹಾಗೂ ಮೃತಳ ಸಂಬಂಧಿಕರು ಸ್ಥಳಕ್ಕಾಗಮಿಸಿ ರಸ್ತೆಯನ್ನ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ನಿಮಿತ್ತ ಚತುಷ್ಪಥ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಕಾಮಗಾರಿಯನ್ನ ಅರ್ಧಕ್ಕೆ ನಿಲ್ಲಿಸಲಾಗಿದೆ. ಇದರಿಂದಾಗಿ ಎಲ್ಲೆಂದರಲ್ಲಿ ಗುಂಡಿಗಳು ಬಾಯ್ತೇರೆದಿದ್ದು, ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments