ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉಪವಾಸ ಸತ್ಯಾಗ್ರಹ

ಬಜೆಟ್ ಅಧಿವೇಶನಕ್ಕೆ ಸಂಪೂರ್ಣವಾಗಿ ಅಡ್ಡಿಪಡಿಸಿ, ಅಧಿವೇಶನ ನಡೆಯದಂತೆ ಮಾಡಿದ ವಿರೋಧ ಪಕ್ಷಗಳ ಕ್ರಮವನ್ನು ಖಂಡಿಸಿ ಏಪ್ರಿಲ್ 12 ರಂದು ಒಂದು ದಿನಗಳ ಕಾಲ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಪ್ರಧಾನಿ ಮೋದಿಯವರೊಂದಿಗೆ ಬಿಜೆಪಿಯ ಹಲವು ಮುಖಂಡರೂ ಜೊತೆಯಾಗಲಿದ್ದಾರೆ. ಏಪ್ರಿಲ್.12 ರಂದು ಕರ್ನಾಟಕದ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೂಡ ಇದೆ ವಿಷಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಧರಣಿ ಕೂರಲಿದ್ದಾರೆ. ಇದಕ್ಕೂ ಮುನ್ನ, ಕೇಂದ್ರ ಸರ್ಕಾರ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು ಆರೋಪಿಸಿ ಏ.9 ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಒಂದು ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು.
Comments