ಭಾರತೀಯ ಸೈನಿಕರ ದಿಟ್ಟ ಉತ್ತರ.. ಐವರು ಪಾಕ್ ಸೈನಿಕರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಬಿಂಬಿರ್ ಮತ್ತು ಬಾಟ್ಲರ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕ್ ಸೈನಿಕರ ಮೇಲೆ ಭಾರತೀಯ ಸೈನಿಕರು ಪ್ರತಿ ದಾಳಿ ನಡೆಸಿ ತಕ್ಕ ಉತ್ತರ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಪಾಕಿಸ್ತಾನದ ಸೈನಿಕರು ಗಡಿ ಪ್ರದೇಶದಲ್ಲಿ ನಿರಂತರ ಗುಂಡಿನ ದಾಳಿ ನಡೆಸುತ್ತಿದ್ದು, ಅದಕ್ಕೆ ಭಾರತೀಯ ಸೈನಿಕರು ಗಡಿ ಪ್ರದೇಶದಲ್ಲಿ ನಿರಂತರ ಗುಂಡಿನ ದಾಳಿ ನಡೆಸುತ್ತಿದ್ದರು. ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಐವರು ಪಾಕ್ ಸೈನಿಕರು ಮೃತಪಟ್ಟಿರುವುದು ಸಾಬೀತಾಗಿದೆ. ಈ ವೇಳೆ ೬ ಮಂದಿ ಗಂಭೀರ ಗಾಯಗೊಂಡಿದ್ದಾರೆ.
Comments