ಚಾರ್ಮಾಡಿ ಘಾಟ್ ಬಳಿ ಕಂದಕಕ್ಕೆ ಬಿದ್ದ ಸ್ಕಾರ್ಪಿಯೋ

ಚಿಕ್ಕಮಗಳೂರು: ಹಾಸನದಿಂದ ಮಂಗಳೂರಿಗೆ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ಚಿಕ್ಕಮಗಳೂರು ಜಿಲ್ಲೆಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ೪೦೦ ಅಡಿ ಆಳದ ಕಂದಕಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ೪೦೦ ಅಡಿಯ ಪ್ರಪಾತಕ್ಕೆ ಬೀಳಲು ಮಳೆ ಹಾಗೂ ದಟ್ಟವಾದ ಮಂಜು ಕವಿದಿದ್ದೇ ಕಾರಣಯ ೪೦೦ ಅಡಿ ಪ್ರಪಾತಕ್ಕೆಬಿದ್ದ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಕಾರನ್ನು ಮೇಲೆತ್ತಲು ಹರಸಾಹಸ ಪಡುತಿದ್ದಾರೆ.
Comments