ಡಾರ್ಜಲಿಂಗ್ ನಲ್ಲಿ ಘರ್ಷಣೆ, ಇಬ್ಬರ ದುರ್ಮರಣ
ಡಾರ್ಜಲಿಂಗ್: ಗೂರ್ಖಾ ಜನಮುಕ್ತಿ ಮೋರ್ಚಾದ (ಜಿಜೆಎಂ) ಪ್ರತಿಭಟನಾಕಾರರು ಶನಿವಾರ ಪೊಲೀಸರ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ತೂರಿರುವ ಘಟನೆ ವರದಿಯಾಗಿದೆ. ಈ ವೇಳೆ ಪೊಲೀಸರು ಹಾಗೂ ಬೆಂಬಲಿಗರ ಮಧ್ಯೆ ಪರಸ್ಪರ ಘರ್ಷಣೆ ಏರ್ಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಡಾರ್ಜಲಿಂಗ್ ನಲ್ಲಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿ ಪ್ರತಿಭಟನೆ ಹಾಗೂ ಯಾವುದೇ ಬಗೆಯ ಮೆರವಣಿಗೆಗೆ ಅವಕಾಶ ನೀಡಿರಲಿಲ್ಲ, ಆದರೆ ಜಿಜೆಎಂ ಬೆಂಬಲಿಗರು ನಿಷೇಧ ಉಲ್ಲಂಘಿಸಿ ಮೆರವಣಿಗೆ ನಡೆಸಿದ್ದಾರೆ. ಸದ್ಯ ಪ್ರತಿಭಟನೆಯನ್ನು ಹತ್ತಿಕ್ಕುವ ಯತ್ನವನ್ನು ಪೊಲೀಸರು ಮುಂದುವರೆಸಿದ್ದಾರೆ.
Comments