ವಿಧಾನಸಭೆ ಒಪ್ಪಿಗೆ ಮೇರೆಗೆ ,ರವಿ ಬೆಳಗೆರೆ ಸೇರಿ ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು ಶಿಕ್ಷೆ

ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್ ರಾಜ್ ಹಾಗೂ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಗೆ ಸ್ಪೀಕರ್ ಕೆ.ಬಿ. ಕೋಳಿವಾಡ 1 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ.
ಶಾಸಕ ನಾಗರಾಜ್ ಹಾಗೂ ಕೆ.ಬಿ. ಕೋಳಿವಾಡ ವಿರುದ್ಧ ಅವಹೇಳನಕಾರಿಯಾಗಿ ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಕ್ಕು ಬಾಧ್ಯತಾ ಸಮಿತಿಯಲ್ಲಿ ಪತ್ರಿಕೆ ಸಂಪಾದಕರ ವಿರುದ್ಧ ದೂರು ನೀಡಲಾಗಿ. ದೂರಿನನ್ವಯ ಸಮಿತಿಯು ರವಿ ಬೆಳಗೆರೆ ಅವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸುವಂತೆ ಶಿಫಾರಸು ಮಾಡಿತ್ತು. ಸಮಿತಿಯ ಶಿಫಾರಸಿನಂತೆ ಅವರ ವಿರುದ್ಧ 1 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಬೇಕೆಂದು ಸದನದಲ್ಲಿ ಪಕ್ಷಭೇದ ಮರೆತು ಶಾಸಕರು ಒತ್ತಾಯ ಮಾಡಿದರು.
ಸದನದ ಒಪ್ಪಿಗೆಯ ಹಿನ್ನೆಲೆಯಲ್ಲಿ ಸ್ಪೀಕರ್ ಕೆ.ಬಿ. ಕೋಳಿವಾಡ ಶಿಕ್ಷೆ ಘೋಷಿಸಿದ್ದಾರೆ. ಅದೇ ರೀತಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ವಿರುದ್ಧ ಯಲಹಂಕ ವಾಯ್ಸ್ ಪತ್ರಿಕೆಯಲ್ಲಿ ನಿರಂತರವಾಗಿ ಅವಹೇಳಕಾರಿಯಾಗಿ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಹಕ್ಕುಚ್ಯುತಿ ಮಂಡಿಸಿದ್ದರು.
ಪತ್ರಿಕೆ ಸಂಪಾದಕರು ಸದನವನ್ನೇ ಅವಮಾನಿಸುವ ರೀತಿಯಲ್ಲಿ ವರದಿ ಗಳನ್ನು ಪ್ರಕಟಿಸುತ್ತಿದ್ದಾರೆ. ಈ ರೀತಿಯ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಈ ರೀತಿಯ ಬ್ಲಾಕ್ ಮೇಲ್ ಮಾಡುವ ಪತ್ರಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Comments