ಬೆಂಗಳೂರಲ್ಲಿ ರಸ್ತೆ ಅಫಘಾತ, ಟೆಕ್ಕಿ ಯುವತಿ ಸಾವು
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಟೆಕ್ಕಿ ಯುವತಿಯ ತಲೆ ಮೇಲೆ ಲಾರಿ ಹರಿದ ಪರಿಣಾಮ ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ನಡೆದಿದೆ. ಮೃತ ಟೆಕ್ಕಿಯನ್ನು ವೈಟ್ ಫೀಲ್ಡ್ ನ ಸಾಫ್ಟ್ ವೇರ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾವ್ಯಶ್ರೀ ಎಂದು ಗುರುತಿಸಲಾಗಿದೆ.
ಗುಜರಾತ್ ಮೂಲದವರಾದ ಕಾವ್ಯಶ್ರೀ ಆಕ್ಸಿಸ್ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಇವರ ತಲೆ ಮೇಲೆ ಹರಿದಿದೆ. ಈ ಸಂಬಂಧ ಲಾರಿ ಚಾಲಕನನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ಸ್ ಸಿಟಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Comments