ಭಯೋತ್ಪಾದಕರ ದಾಳಿ ಎಚ್ಚರಿಕೆ ,. ಪಂಜಾಬ್ ನಲ್ಲಿ ಹೈ ಅಲರ್ಟ್
ದೇಶದಲ್ಲಿ ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸಲಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ
ಪಂಜಾಬ್ : ಭಯೋತ್ಪಾದನಾ ದಾಳಿ ಹಿನ್ನಲೆ ಪಂಜಾಬ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್ ಪೊಲೀಸರಿಗೆ ದಾಳಿ ನಡೆಸುವ ಕುರಿತು ಮಾಹಿತಿ ಸಿಕ್ಕಿದೆ. ದೇಶದಲ್ಲಿ ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸಲಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ಉಗ್ರರು ಪ್ರಮುಖ ಸ್ಥಳಗಳ ನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಹೆಚ್ಚಿದೆ. ಪಂಜಾಬ್ ಪೊಲೀಸರು ಎಲ್ಲಾ ಜಿಲ್ಲೆಗಳಲ್ಲಿ ಈಗಾಗ್ಲೇ ಹೈಅಲರ್ಟ್ ಘೋಷಿಸಿದ್ದಾರೆ. ಗುಪ್ತಚರ ಇಲಾಖೆಗೆ ದೊರೆತಿರುವ ಮಾಹಿತಿ ಪ್ರಕಾರ , ಭಯೋತ್ಪಾದಕರು ಮಾರುಕಟ್ಟೆ ಸ್ಥಳಗಳ ಮೇಲೆ, ಪ್ರವಾಸಿ ಸ್ಥಳ, ವಿಮಾನ ನಿಲ್ದಾಣಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಬ್ಬದ ಸೀಸನ್ ನಲ್ಲಿ ಪ್ರಮುಖ ನಗರಗಳ ಜನಸಂದಣಿ ಇರುವ ಪ್ರದೇಶಗಳೇ ಭಯೋತ್ಪಾಕರ ಗುರಿಯಾಗಿದೆ ಎನ್ನಲಾಗುತ್ತಿದೆ.
Comments