ಜಮ್ಮು ಕಾಶ್ಮೀರದಲ್ಲಿ ಲಷ್ಕರ್ ಉಗ್ರರಿಂದ ಫೈರಿಂಗ್
ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಲಷ್ಕರ್ -ಎ-ತೊಯ್ಬಾದ ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದರು. ಮನೆಯನ್ನು ಸುತ್ತುವರಿದ ಭದ್ರತಾ ಪಡೆಗಳ ಫೈರಿಂಗ್ ನಡೆಸಿದ್ರು. ಈ ವೇಳೆ ಉಗ್ರರು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮನೆಯೊಳಗೆ ಇನ್ನಷ್ಟು ನಾಗರಿಕರನ್ನು ಉಗ್ರರು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ. ನಾಗರಿಕರನ್ನು ಮೊದಲು ರಕ್ಷಿಸಿ ನಂತರ ಭಯೋತ್ಪಾದಕರನ್ನು ಸದೆ ಬಡಿಯಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
Comments