ಅಜಂ ಖಾನ್ ವಿರುದ್ಧ ದೇಶದ್ರೋಹದ ಪ್ರಕರಣ
ಮೀರತ್ : ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಉತ್ತರಪ್ರದೇಶದ ಬಿಜ್ ನೋರ್ ನ ಚಾಂದ್ ಪುರ ಪೊಲೀಸ್ ಠಾಣೆಯಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ರಾಮ್ ಪುರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಅಜಂ ಖಾನ್ ಮಹಿಳೆಯರ ಕುರಿತು ಅವಮಾನಕರ ಹಿಂಸೆ ಕಾಶ್ಮೀರ, ತ್ರಿಪುರಾ, ಜಾರ್ಖಂಡ್, ಬಂಗಾಳ ಮತ್ತಿತ್ತರ ಕಡೆಗಳಲ್ಲಿ ನಡೆಯುತ್ತಿದೆ ಎಂದು ಹೇಳಿದ್ದರು. ಇದಕ್ಕೆ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.
ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ಸಂಘಟನೆಗಳು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124(ದೇಶದ್ರೋಹ), ಸೆಕ್ಷನ್ 131 ಹಾಗೂ 505 ಅನ್ವಯ ಪ್ರಕರಣ ದಾಖಲಾಗಿದೆ ಎಂದು ಚಾಂದ್ ಪುರ್ ಪೊಲೀಸ್ ಠಾಣಾಧಿಕಾರಿ ಅಜಯ್ ಕುಮಾರ್ ಸಿಂಗ್ ಹೇಳಿದ್ದಾರೆ.
Comments