ಬಾಲ್ಯ ವಿವಾಹ ತಡೆದ ಅಧಿಕಾರಿಗಳು
ಹರಿಯಾಣಾದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ
ಹರಿಯಾಣಾ: ಹರಿಯಾಣಾದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ ಘಟನೆ ವರದಿಯಾಗಿದೆ. 16 ವರ್ಷದ ಬಾಲಕಿಯವಿವಾಹ ಹಮ್ಮಿಕೊಳ್ಳಲಾಗಿತ್ತು. ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಬಬಿತಾ ಚೌಧರಿ ಮದುವೆ ತಡೆಯುವಲ್ಲಿ ಸಫಲರಾಗಿದ್ದಾರೆ.
ಆಯಾ ಮನೆಯವರು ಮದುವೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ವರನನ್ನು ಮೆರವಣಿಗೆ ಮೂಲಕ ಕರೆದು ಕೊಂಡು ಬರಲಾಗಿತ್ತು. ಇನ್ನೇನು ಮಾಂಗಲ್ಯ ಧಾರಣೆ ನಡೆಯುತ್ತೆ ಎಂಬುವಷ್ಟರಲ್ಲಿ ಧಿಡೀರನೆ ಸ್ಥಳಕ್ಕೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಗಮಿಸಿ ಬಾಲ್ಯವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿಯ ಮದುವೆಗೆ ಕುಟುಂಬದವರು ಹಾಗೂ ಸಂಬಂಧಿಕರು ಭಾಗಿಯಾಗಿದ್ದರು.
ಈ ವೇಳೆ ಅಧಿಕಾರಿಗಳು ಬಾಲಕಿಯ ತಂದೆಗೆ ದಾಖಲೆಗಳನ್ನುನೀಡುವಂತೆಸೂಚಿಸಿದ್ರು ಕುಟುಂಬದವರು ಯಾವುದೇ ದಾಖಲೆಗಳನ್ನು ನೀಡಲಿಲ್ಲ. ಬಾಲ್ಯ ವಿವಾಹ ಮಾಡುವುದು ಅಪರಾಧ, ಕಾನೂನು ಪಾಲನೆ ಮಾಡಬೇಕು, ಇಲ್ಲವಾದಲ್ಲಿಕಠಿಣಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳು ಬಾಲಕಿಯ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ.
Comments