ಆರೆಸ್ಸಸ್ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಆರೆಸ್ಸಸ್ ಕಾರ್ಯಕರ್ತನೋರ್ವನ ಮೇಲೆ ತಂಡವೊಂದು ದಾಳಿ ನಡೆಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ
ಬಿ.ಸಿ ರೋಡ್ ಬಳಿ ನಡೆದಿದೆ. ಸಜಿಪಮುನ್ನೂರು ಗ್ರಾಮದ ಕಂದೂರು ನಿವಾಸಿ ತನಿಯಪ್ಪ ಎಂಬುವವರ ಪುತ್ರ ಶರತ್ ಗಾಯಗೊಂಡ
ಯುವಕನಾಗಿದ್ದಾರೆ.
ಮಂಗಳವಾರ ರಾತ್ರಿ ಕೆಲಸ ಮುಗಿಸಿ, ಅಂಗಡಿಯಿಂದ ಹೊರಬರುತ್ತಿರುವ ವೇಳೆ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ
ಈ ಕೃತ್ಯವೆಸಗಿದ್ದಾರೆ. ಚೂರಿ ಇರಿತಕ್ಕೆ ಒಳಗಾದ ಶರತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಯಲ್ಲಿದ್ದರೂ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
Comments