3,500 ಕೋಟಿ ರೂ ಮೌಲ್ಯದ ಹೆರಾಯಿನ್ ಜಪ್ತಿ

ಸೂರತ್ : ಮಹತ್ವದ ಕಾರ್ಯಾಚರಣೆ ನಡೆಸಿದ ಕರಾವಳಿ ರಕ್ಷಣಾ ಪಡೆಗಳ ಹಡಗಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3,500 ಕೋಟಿ ರೂಪಾಯಿ ಮೌಲ್ಯದ 1,500 ಹೆರಾಯಿನ್ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡಿರುವ ಮಾದಕ ವಸ್ತು ಭಾರತದ ಇತಿಹಾಸದಲ್ಲೇ ದೊಡ್ಡ ಪ್ರಮಾಣದ್ದು ಎಂದು ತಿಳಿದು ಬಂದಿದೆ. ಪನಾಮಾಕ್ಕೆ ಹಡಗಿ ನಲ್ಲಿ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ.
ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಶುಕ್ರವಾರ ರಾತ್ರಿ ಹಡಗನ್ನು ಸುತ್ತುವರಿದು ಮಾದಕ ವಸ್ತು ಗಳನ್ನುವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಹಡಗಿನಲ್ಲಿದ್ದ ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕರಾವಳಿ ರಕ್ಷಣಾ ಪಡೆ, ಗುಪ್ತಚರಇಲಾಖೆ, ಪೊಲೀಸರು, ಕಸ್ಟಮ್ಸ್ ಅಧಿಕಾರಿಗಳು ನೌಕಾಪಡೆ ಮತ್ತು ಇತರ ಭದ್ರತಾ ಸಂಸ್ಥೆಗಳು ಈ ಬಗ್ಗೆ ತನಿಖೆ ನಡೆಸುತ್ತಿವೆ.
Comments