ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪತ್ತೆ ಕಾರ್ಯಕ್ಕೆ ಹೊಸ ಟ್ವಿಸ್ಟ್?

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಗೌರಿ ಲಂಕೇಶ್ ಮೊಬೈಲ್ ಮೂಲಕ ರಸ್ತೆಗಳ ಪತ್ತೆ ಕಾರ್ಯ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಗೌರಿ ಲಂಕೇಶ್ ಮೊಬೈಲ್ ಮೂಲಕ ರಸ್ತೆಗಳ ಪತ್ತೆ ಕಾರ್ಯ ಪರಿಶೀಲನೆ ನಡೆಸಲಾಗುತ್ತಿದೆ. ಈ ದಿಕ್ಕಿನಲ್ಲಿ ಬರುವ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೇ, 150ಕ್ಕೂ ಅಧಿಕ ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲನೆ ಕೂಡ ನಡೆಸಲಾಗುತ್ತಿದೆ.
ಈ ಮಧ್ಯೆ ಮತ್ತೊಂದು ತಂಡದಿಂದ ಹಂತಕನ ಬೈಕ್ ಪತ್ತೆ ಹಚ್ಚಲಾಗುತ್ತಿದೆ. ಮತ್ತೊಂದು ತಂಡ ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಪಿಸ್ತೂಲ್ ಎಲ್ಲಿಂದ ಬಂತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪನ್ಸಾರೆ, ದಾಬೋಲ್ಕರ್, ಕಲಬುರ್ಗಿ ಹತ್ಯೆಗೂ ಗೌರಿ ಹತ್ಯೆಗೂ ಗೌರಿ ಹತ್ಯೆಗೂ ಶೇ.90ರಷ್ಟು ಸಾಮ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ನಾಲ್ಕು ಕೊಲೆಗಳಲ್ಲಿ 7.6 ಎಂಎಂ ಪಿಸ್ತೂಲ್ ಬಳಕೆಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖಾ ತಂಡ ಹಿಂದಿನ ಪ್ರಕರಣಗಳನ್ನು ಪರಿಶೀಲಿಸುತ್ತಿದೆ.
Comments