ಜೀವನವೇ ಬೇಸರವಾಗಿ ಮದ್ಯದಲ್ಲಿ ವಿಷ ಬೆರೆಸಿ ಕುಡಿದ ಯುವಕ

13 Sep 2017 6:04 PM | Crime
562 Report

ಕೇರಳದ ಯರ‍್ನಾಕುಲಂನ ಜೋಸೆಫ್, ಉದ್ಯೋಗ ಅರಸಿ ವರ್ಷದ ಹಿಂದೆ ನಗರಕ್ಕೆ ಬಂದು ಒಬ್ಬಂಟಿಯಾಗಿ ವಾಸವಿದ್ದರು. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಗಂಗಮ್ಮಗುಡಿ ಠಾಣಾ ವ್ಯಾಪ್ತಿಯ ಅಯ್ಯಪ್ಪನಗರದ ಬಾಲಾಜಿ ಅಪಾರ್ಟ್‌ಮೆಂಟ್‌ನಲ್ಲಿ ಜತಿನ್ ಜೋಸೆಫ್ (27) ಎಂಬುವರು ಮೃತಪಟ್ಟಿದ್ದಾರೆ.' ನಾನು ಒಬ್ಬಂಟಿಗ, ನನಗೆ ಯಾರೂ ಸ್ನೇಹಿತರಿಲ್ಲ. ಜೀವನವೇ ಬೇಸರವಾಗಿದೆ, ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಅಮೆರಿಕದಲ್ಲಿರುವ ಅಣ್ಣನಿಗೆ ತಿಳಿಸಿದ್ದಾನೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಜೋಸೆಫ್ ಜೀವನದ ಬಗ್ಗೆ ಜಿಗುಪ್ಸೆಗೊಂಡು ಆತ್ಮ ಹತ್ಯೆಮಾಡಿಕೊಂಡಿದ್ದಾನೆ ಅಣ್ಣನಿಂದ ಮಾಹಿತಿ ತಿಳಿದ ಸಂಬಂಧಿಕರು ಕೂಡಲೇ ಮನೆಗೆ ಬಂದು ನೋಡಿದಾಗ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.ಮಗ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದ. ಯಾರೊಂದಿಗೂ ಸರಿಯಾಗಿ ಮಾತನಾಡುತ್ತಿರಲಿಲ್ಲ. ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಪೋಷಕರು ತಿಳಿಸಿದ್ದಾರೆ. ಅಂಬೇಡ್ಕರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮೃತದೇಹವನ್ನು ಹಸ್ತಾಂತರಿಸಿದ್ದೇವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೋಲಿಸರು ಹೇಳಿದರು.

 

Courtesy: prajavani

Comments