ಪರಪ್ಪನ ಅಗ್ರಹಾರದಲ್ಲಿ ಲವ್ವಿ ಡವ್ವಿ ಕರ್ಮಕಾಂಡ... !

ಒಬ್ಬ ಕೊಲೆ ಮತ್ತು ಅತ್ಯಾಚಾರದ ಅಪರಾಧಿ ಜೈಲಿನಲ್ಲಿ ಲವ್ವಿ ಡವ್ವಿ ನಡೆಸುತ್ತಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇದಷ್ಟೇ ಅಲ್ಲದೇ ಕೈದಿ ಶಿವಕುಮಾರ್ ಅನಾರೋಗ್ಯದ ಕಾರಣ ನೀಡಿ ಜೈಲಿನ ಮಹಿಳಾ ಹೋಮ್ ಗಾರ್ಡ್ ಜೊತೆ ಸುತ್ತಾಟ ನಡೆಸುತ್ತಿರುವ ವಿಚಾರವೂ ಬಹಿರಂಗವಾಗಿದೆ.
ಟೆಕ್ಕಿ ಪ್ರತಿಭಾ ರೇಪ್ ಅಂಡ್ ಮರ್ಡರ್ ಪ್ರಕರಣದಲ್ಲಿ ಅಪರಾಧಿಯಾಗಿರುವ ಶಿವಕುಮಾರ್ ಜೈಲಿನ ಮಹಿಳಾ ಸಿಬ್ಬಂದಿ ಜೊತೆ ಲವ್ವಿ ಡವ್ವಿ ನಡೆಸಿರುವ ಫೋಟೋ ಬಹಿರಂಗವಾಗಿದೆ. ಕೊಲೆ ಮತ್ತು ಅತ್ಯಾಚಾರದ ಅಪರಾಧಿ ಜೈಲಿನಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಫೋಟೋ ತೆಗೆಸಿಕೊಳ್ಳುವಂತಹ ವಾತಾವರಣ ಸೃಷ್ಟಿಯಾಗಿರೋದು ಜೈಲಿನ ವ್ಯವಸ್ಥೆಯ ಬಗ್ಗೆ ಮತ್ತೆ ಪ್ರಶ್ನೆಗಳು ಏಳುವಂತಾಗಿದೆ. ಡಿಐಜಿ ರೂಪಾ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾಗ ಹಲವು ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಆದ್ರೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಜೈಲಿನ ಅಧಿಕಾರಿಗಳು ನಿರಾಕರಿಸಿದ್ದಾರೆ.ಎಚ್ ಪಿ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರತಿಭಾ(28) ರಾತ್ರಿಪಾಳಿಗೆ ಕಚೇರಿಗೆ ತೆರಳುವಾಗ ಕ್ಯಾಬ್ ಚಾಲಕ ಶಿವಕುಮಾರ್ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ. 2005 ರಲ್ಲಿ ನಡೆದಿದ್ದ ಈ ಘಟನೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಕುಮಾರಸ್ವಾಮಿ ಲೇಔಟ್ ಪೊಲೀಸರು ಶಿವಕುಮಾರ್‌ನನ್ನು ಬಂಧಿಸಿ ಚಾರ್ಜ್‌ಶೀಟ್ ದಾಖಲಿಸಿದ್ದರು. 2010 ರಲ್ಲಿ ತೀರ್ಪು ನೀಡಿದ್ದ ವಿಚಾರಣಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೈಕೋರ್ಟ್ ಈ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಬಳಿಕ ಶಿವಕುಮಾರ್‌ನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿಡಲಾಗಿತ್ತು.
Comments