ನಕಲಿ ಛಾಪಾ ಕಾಗದ ಪ್ರಕರಣ ಅಪರಾಧಿ ಅಬ್ದುಲ್ ಕರೀಂಲಾಲ್ ತೆಲಗಿ ನಿಧನ

26 Oct 2017 5:57 PM | Crime
443 Report

ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ರೂವಾರಿ ಕರೀಂ ಲಾಲ್ ತೆಲಗಿ ಇಂದು 4. 45 ರ ಸುಮಾರಿಗೆ ನಿಧನನಾಗಿದ್ದಾನೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ತೆಲಗಿ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನನಾಗಿದ್ದಾನೆ ಎಂದು ತಿಳಿದು ಬಂದಿದೆ.

56 ವರ್ಷದ ತಲಗಿ ಬಹುಕೋಟಿ ಛಾಪಾಕಾಗದ ಹಗರಣದ ಪ್ರಕರಣದಲ್ಲಿ 2002 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಜಾ ಖೈದಿಯಾಗಿದ್ದ. ಕಳೆದ 10 ದಿನಗಳಿಂದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಲಗಿಯನ್ನು ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನಲೆ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸಕ್ಕರೆ ಕಾಯಿಲೆ, ಬಿಪಿ ಮತ್ತು ಇತರೆ ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ಡ ಅಬ್ದುಲ್ ಕರೀಂ ಲಾಲ್ ತೆಲಗಿಯನ್ನು ಅ.16 ರಂದು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತಿತ್ತು.

Edited By

Hema Latha

Reported By

Madhu shree

Comments