ಚಕ್ಕುಲಿ ತುಂಡನ್ನು ತಿಂದು ಸಾವಿಗೀಡಾದ ಕಂದಮ್ಮ

ಗಂಟಲಲ್ಲಿ ಚಕ್ಕುಲಿ ಸಿಕ್ಕಿಕೊಂಡ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ.ಗೇರುಕಟ್ಟೆಯ ನಿವಾಸಿ ವಿಠಲ್ ಎಂಬುವವರ ಪುತ್ರ ಆರುಷ್ ಸಾವಿಗೀಡಾಗಿರುವ ದುರ್ದೈವಿ.
ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮ ಈ ತುಂಡನ್ನು ನುಂಗಿದೆ. ಪರಿಣಾಮ ಚಕ್ಕುಲಿ ಪೀಸ್ ಗಂಟಲಲ್ಲಿ ಸಿಲುಕಿಕೊಂಡು ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು. ಮಗುವನ್ನು ಗಮನಿಸಿದ ಪೋಷಕರು ಕೂಡಲೇ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲೆಂದು ಕರೆದೊಯ್ದರಾದ್ರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸದ್ಯ ಮಗುವಿನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
Comments