ಸ್ವಾಮೀಜಿ ರಾಸ ಲೀಲೆ ಪ್ರಕರಣ, ನಟಿ ಆತ್ಮ ಹತ್ಯಗೆ ಯತ್ನ

ತಮ್ಮ ಹೆಸರು ಕೇಳಿಬಂದಿದ್ದಕ್ಕೆ ಮನನೊಂದ ನಟಿ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯ ಬಳಿಕ ಸ್ವಂತ ಊರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ಬಂದಿದ್ದ ನಟಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.
ಹುಣಸಮಾರನಹಳ್ಳಿಯ ಮದ್ದೇವಣಾಪುರ ಮಠದ ದಯಾನಂದ ಸ್ವಾಮಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗಿ ವಿಡಿಯೋದಲ್ಲಿರುವುದು ಸ್ಯಾಂಡಲ್ ನಟಿ ಎಂದು ಹೇಳಲಾಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಒಂದೆರಡು ದಿನಗಳಲ್ಲೇ ನಟಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಈ ಕುರಿತು ಹೇಳಿಕೆ ನೀಡಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಘಟನೆ ಬೆಳಕಿಗೆ ಬಂದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದ ನಟಿ, ವಿಡಿಯೊದಲ್ಲಿರುವುದು ತಾವಲ್ಲ. ವಿಡಿಯೊ ಎಡಿಟ್ ಮಾಡಿರಬಹುದೆಂದು ಎಂದು ಹೇಳಿದ್ದರು.
Comments