ಹಾಡಹಗಲೇ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ
ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಕೆ.ಸುರೇಶ್ ಗೌಡರ ಬೆಂಬಲಿಗರಾಗಿದ್ದು, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಾಗ ಅವರನ್ನು ಹಿಂಬಾಲಿಸಿದ್ದರು. ಈಚೆಗೆ ನಡೆದ ಕೊಪ್ಪ ಜಿಲ್ಲಾ ಪಂಚಾಯಿತಿ ಉಪ ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದರು. ಕೊಲೆಗೆ ರಾಜಕೀಯ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದೆ.
ಹೋಬಳಿಯ ಕೆ.ಜಿ.ಕೊಪ್ಪಲು ಗ್ರಾಮದ ಬಳಿಹಾಡಹಗಲೇ ಜೆಡಿಎಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಕೆ.ಮಲ್ಲಿಗೆರೆ ಗ್ರಾಮದ ನಿವಾಸಿ ಸಂತೋಷ್ (27) ಕೊಲೆಯಾದವರು. ಗ್ರಾಮದ ಮರದ ಕೆಳಗೆ ನಿಂತಿದ್ದ ಸಮಯದಲ್ಲಿ 5-6 ಮಂದಿ ದುಷ್ಕರ್ಮಿಗಳು ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
Comments