ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಪೋಲೀಸರ ವಶಕ್ಕೆ

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆ ಮಾಡಲು ಸುಪಾರಿ ನೀಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ, ಎಸ್‍ಐಟಿ ಪೊಲೀಸರು ರವಿ ಬೆಳಗೆರೆಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರನ್ನು ವಿಶೇಷ ತನಿಖಾ ದಳ ಪೊಲೀಸರು ಪದ್ಮಾನಾಭ ನಗರ ಅವರ ನಿವಾಸದಲ್ಲಿ ಇಂದು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಮೂಲದ ಶಾರ್ಪ್ ಶೂಟರಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರವಿ ಬೆಳಗೆರೆ ಅವರ ಪಾತ್ರವಿರುವುದು ಪತ್ತೆಯಲ್ಲಿ ಬೆಳಕಿಗೆ ಬಂದಿದೆ. ಗೌರಿ ಲಂಕೇಶ್ ಅವರ ಹತ್ಯೆಯ ಕುರಿತು ತನಿಖೆ ನಡೆಸುತ್ತಿರುವ ಎಸ್‍ಐಟಿ ತಂಡಕ್ಕೆ ಈ ಶಾರ್ಪ್ ಶೂಟರ್‍ಗಳು ಸಿಕ್ಕಿಬಿದ್ದಿದ್ದರು. ಇವರನ್ನು ಸಿಸಿಬಿಯ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಾಗ ಕೆಲ ಸ್ಫೋಟಕ ಮಾಹಿತಿಗಳು ಬಯಲಿಗೆ ಬಂದಿದೆ.
Comments