ಜೆಡಿಎಸ್ ಮುಖಂಡ, ಮಾಜಿ ಕಾರ್ಪೋರೇಟರ್ ಗೋವಿಂದೇಗೌಡನ ಬರ್ಬರ ಹತ್ಯೆ

09 Dec 2017 10:46 PM | Crime
1566 Report

ಜೆಡಿಎಸ್ ಮುಖಂಡ ಹಾಗೂ ಮಾಜಿ ಕಾರ್ಪೋರೇಟರ್ ಗೋವಿಂದೇ'ಗೌಡ(58) ಅವರನ್ನು ಸುಂಕದಕಟ್ಟೆ ಬಳಿಯ ಹೆಗ್ಗನಹಳ್ಳಿ ಮುಖ್ಯರಸ್ತೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರ'ಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇಂದು ಸಂಜೆ 4.30ಕ್ಕೆ ಹೆಗ್ಗನಹಳ್ಳಿ ಮುಖ್ಯರಸ್ತೆಯ ಕಲ್ಯಾಣ ಮಂಟಪದ ಬಳಿ ಗೋವಿಂದೇ ಗೌಡನ ಮೇಲೆ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಈತನನ್ನು ಸುಂಕದಕಟ್ಟೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Edited By

Shruthi G

Reported By

Shruthi G

Comments