ಮಾನಸಿಕ ಅಸ್ವಸ್ಥ ನಿಕೆ ಅಮಾನುಷವಾಗಿ ಥಳಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡರು

ಈ ಘಟನೆ ಪಾಲಕ್ಕಾಡ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಗ್ರಾಮದ ಪಕ್ಕದ ಅರಣ್ಯ ಪ್ರದೇಶದಲ್ಲಿ ವಾಸವಾಗಿದ್ದ ಯುವಕ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನೆನ್ನಲಾಗಿದ್ದು, ಸ್ಥಳೀಯ ಅಂಗಡಿಗಳಿಂದ ಸಾಮಾನುಗಳನ್ನು ಕದಿಯುತ್ತಿದ್ದನೆಂದು ಹೇಳಲಾಗಿದೆ.
ಕೆಲ ಸ್ಥಳೀಯರು ಆತನನ್ನು ಹಿಡಿದು ಕಟ್ಟಿ ಹಾಕಿ ಗಂಟೆಗಟ್ಟಲೆ ಆತನನ್ನು ಹಿಂಸಿಸಿದ್ದರು. ಅಮಾನವೀಯತೆಯ ಪರಮಾವಧಿಯೆಂಬಂತೆ ಈ ಸಂದರ್ಭ ಹಲವರು ಸೆಲ್ಫಿಗಳನ್ನೂ ಕ್ಲಿಕ್ಕಿಸಿದ್ದರು. ಪೊಲೀಸರು ಘಟನೆಯ ಬಗ್ಗೆ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿ ಹಲ್ಲೆಗೊಳಗಾದ ಯುವಕನನ್ನು ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ತೀವ್ರ ಗಾಯಗಳಿಂದಾಗಿ ಮೃತಪಟ್ಟಿದ್ದಾನೆ. ಪೊಲೀಸರು ಪೋಸ್ಟ್ ಮಾರ್ಟಂ ವರದಿಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಘಟನೆಗಳು ಕೇರಳದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.
Comments