ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ

ಬೆಚ್ಚಿ ಬೀಳಿಸುವ ಘಟನೆಯೊಂದರಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ಬುಧವಾರ ನಡೆದ ಬಗ್ಗೆ ವರದಿಯಾಗಿದೆ. ಲೋಕಾಯುಕ್ತ ಕಚೇರಿಯಲ್ಲೇ ಘಟನೆ ನಡೆದಿದೆ ಎಂದು ವರದಿಯಾಗಿದ್ದು,ವಿಚಾರಣೆಗೆ ಬಂದಿದ್ದ ತೇಜಸ್ ಶರ್ಮಾ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ವಿಶ್ವನಾಥ್ ಶೆಟ್ಟಿ ಅವರ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.ಆರೋಪಿ ತೇಜಸ್ ಶರ್ಮಾನನ್ನು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಲೋಕಾಯುಕ್ತರಿಗೆ ಶರ್ಮಾ 3 ಬಾರಿ ಇರಿದಿದ್ದು, ಇರಿತದ ತೀವ್ರತೆಗೆ ಚಾಕು ಮುರಿದು ಹೋಗಿದೆ ಎನ್ನಲಾಗಿದೆ.
Comments