ನಿರ್ಮಾಪಕಿ ಜಯಶ್ರೀದೇವಿಯವರನ್ನು ಬಂಧಿಸಿದ ಚಾಮರಾಜಪೇಟೆ ಪೊಲೀಸರು
ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕಿ ಜಯಶ್ರೀದೇವಿ ಅವರನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ ಪಿಕ್ಚರ್ಸ್ ಸಂಸ್ಥೆಯ ಆನಂದ್ ಅವರಿಗೆ ನೀಡಿದ್ದ ಚೆಕ್ ಬೌನ್ಸ್ ಆಗಿದ್ದು, ಕೋರ್ಟ್ ನಲ್ಲಿ ಕೇಸ್ ದಾಖಲಾಗಿತ್ತು. ಕೋರ್ಟ್ ಸೂಚನೆ ಮೇರೆಗೆ ಜಯಶ್ರೀದೇವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆನಂದ್ ಅವರಿಂದ 50 ಲಕ್ಷ ರೂ. ಪಡೆದುಕೊಂಡಿದ್ದ ಜಯಶ್ರೀದೇವಿ 34 ಲಕ್ಷ ರೂ. ಚೆಕ್ ನೀಡಿದ್ದು, ಅದು ಬೌನ್ಸ್ ಆಗಿತ್ತು. ಸುಮಾರು 11 ವರ್ಷಗಳ ಹಿಂದೆ ಜಯಶ್ರೀದೇವಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಸೂಚನೆ ಮೇರೆಗೆ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. 'ಮುಕುಂದ ಮುರಾರಿ', 'ಶ್ರೀ ಮಂಜುನಾಥ', 'ವಂದೇಮಾತರಂ' ಸೇರಿ ಹಲವಾರು ಚಿತ್ರಗಳನ್ನು ಅವರು ನಿರ್ಮಾಣ ಮಾಡಿದ್ದಾರೆ.
Comments