ಅರ್ಜುನ ಪ್ರಶಸ್ತಿ ವಿಜೇತ ಆಟಗಾರನ ವಿರುದ್ಧ ಅತ್ಯಾಚಾರದ ದೂರು ದಾಖಲು
ಅರ್ಜುನ ಪ್ರಶಸ್ತಿ ವಿಜೇತ ಟೇಬಲ್ ಟೆನಿಸ್ ಆಟಗಾರ ಸೌಮ್ಯಜಿತ್ ಘೋಷ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮದುವೆಯಾಗುವುದಾಗಿ ಭರವಸೆ ನೀಡಿ ಮೋಸ ಮಾಡಿದ್ದಾರೆ ಅಂತಾ 18 ವರ್ಷದ ಯುವತಿಯೊಬ್ಬಳು ಪಶ್ಚಿಮ ಬಂಗಾಳದ ಬರಸಾತ್ ನಲ್ಲಿ ದೂರು ದಾಖಲಿಸಿದ್ದಾಳೆ.
ಮೂರು ವರ್ಷಗಳಿಂದ್ಲೂ ಸೌಮ್ಯಜೀತ್ ತನ್ನೊಂದಿಗೆ ಸಂಬಂಧ ಹೊಂದಿದ್ದಾರೆ, ಆದ್ರೆ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾರೆ ಅಂತಾ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.ಸೌಮ್ಯಜೀತ್ ಮದುವೆಯಾಗುವ ಭರವಸೆ ಕೊಟ್ಟು ಅತ್ಯಾಚಾರ ಮಾಡಿದ್ದಾರೆ ಅನ್ನೋದು ಅವಳ ಆರೋಪ. ಈ ಬಗ್ಗೆ ಎಫ್ ಐ ಆರ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Comments