ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಲುಗೆ ಕಂಟಕ, ಉಳಿದ ಆರು ಮಂದಿಗೆ ರಿಲೀಫ್

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟರಾದ ಸಲ್ಮಾನ್ ಖಾನ್, ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ನೀಲಂ ಮತ್ತು ಟಬು ಅವರ ತೂಗು ಕತ್ತಿ ಇದ್ದು ಇಂದು ಕೋರ್ಟ್ ನ ತೀರ್ಪಿನ ಮೇಲೆ ಇವರೆಲ್ಲರ ಭವಿಷ್ಯ ನಿರ್ಧಾರವಾಗಲಿದೆ.
ಪ್ರಮುಖ ಆರೋಪಿ ಸಲ್ಮಾನ್ ಖಾನ್ ವಿರುದ್ಧ ಒಟ್ಟು ಮೂರು ಪ್ರಕರಣ ದಾಖಲಾಗಿತ್ತು. ಎರಡು ಪ್ರಕರಣಗಳಲ್ಲಿ ತಪ್ಪಿತಸ್ಥ ಎಂದು ತೀರ್ಪಿತ್ತಿದ್ದ ಜೋಧಪುರ ನ್ಯಾಯಾಲಯ ಸಲ್ಮಾನ್ ಖಾನ್‌ಗೆ ಶಿಕ್ಷೆ ಪ್ರಕಟಿಸಿತ್ತು. ಆದರೆ ಈ ಎರಡೂ ಪ್ರಕರಣಗಳಲ್ಲಿ ಸಲ್ಮಾನ್ ನಿರ್ದೋಷಿ ಎಂದು ರಾಜಸ್ಥಾನ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪುಗಳನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಈಗಾಗಲೇ ಮೇಲ್ಮನವಿಗಳನ್ನು ಸಲ್ಲಿಸಿದೆ. ಘಟನೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿವೆ.
ಆರು ವರ್ಷ ಶಿಕ್ಷೆ ಸಾಧ್ಯತೆ: ಆರೋಪ ಸಾಬೀತಾದರೆ ಸಲ್ಮಾನ್ ಮತ್ತು ಇತರರು ಒಂದರಿಂದ ಆರು ವರ್ಷದವರೆಗೆ ಜೈಲು ಶಿಕ್ಷೆಗೆ ಒಳಗಾಗಬಹುದು ಎಂದು ಕೃಷ್ಣಮೃಗ ಬೇಟೆ ಪ್ರಕರಣದ ಪಬ್ಲಿಕ್ ಪ್ರಾಸಿಕ್ಯೂಟರ್ ಭವಾನಿ ಸಿಂಗ್ ಭಾಟಿ ತಿಳಿಸಿದ್ದಾರೆ. ಎರಡು ಕೃಷ್ಣಮೃಗಗಳನ್ನು ಕೊಂದ ಆರೋಪ ಸಲ್ಮಾನ್ ಮೇಲಿದೆ. ಅಪರಾಧ ಎಸಗುವಾಗ ಇತರೆ ಆರೋಪಿಗಳು ಅವರ ಜತೆಗಿದ್ದರು ಎಂದು ಅವರು ಹೇಳಿದ್ದಾರೆ. ಕೋರ್ಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Comments