ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಬಸ್, ಇಬ್ಬರ ಸಾವು

ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಶಶಿಧರ್(14) ಮತ್ತು ದಯಾನಂದ್(38) ಎಂದು ಗುರುತಿಸಲಾಗಿದೆ.
ಸುಗಮ ಟ್ರಾವೆಲ್ಸ್‍ನ ಸ್ಲೀಪರ್ ಕೋಚ್‍ನ ಬಸ್‍ನಲ್ಲಿ ಸುಮಾರು 31 ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಈತನ ಪೋಷಕರು ಸಹ ಗಾಯಗೊಂಡಿದ್ದು , ಅವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕ್ರೇನ್ ಬಳಸಿ ರಸ್ತೆಬದಿ ಉರುಳಿದ್ದ ಬಸ್‍ನ್ನು ಮೇಲೆಕ್ಕೆ ಎತ್ತಲಾಗಿದೆ. ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಹಿರಿಸಾವೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.
Comments