ಶಿವಸೇನಾ ನಾಯಕ ಸಚಿನ್ ಸಾವಂತ್‌ಗೆ ಗುಂಡಿಟ್ಟು ಹತ್ಯೆ

ಶಿವಸೇನಾ ನಾಯಕರಾದ ಸಚಿನ್ ಸಾವಂತ್ ಅವರನ್ನು ಮುಂಬೈನ ಕಂಡಿವಲಿಯ ಗೋಕುಲ್ ನಗರದಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.
ಭಾನುವಾರ ರಾತ್ರಿ 8 ಗಂಟೆಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಸಾವಂತ್ ಅವರ ಕಾರನ್ನು ಅಡ್ಡಗಟ್ಟಿ ಅವರ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿಯನ್ನು ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಾವಂತ್ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋದರು ಏನು ಪ್ರಯೋಜನವಾಗಲಿಲ್ಲ .ಮಾರ್ಗ ಮಧ್ಯದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
Comments