ಗಲ್ಲು ಶಿಕ್ಷೆಗೂ ಕೇರ್ ಮಾಡದ ರೇಪಿಸ್ಟ್ ಗಳು- ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಚಾರ

ಅತ್ಯಾಚಾರಿಗಳಿಗೆ ಮರಣ ದಂಡನೆ ಮತ್ತು ಕಠಿಣ ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಅನುಷ್ಠಾನಕ್ಕೆ ಬಂದ್ರೂ ಕೂಡ ರೇಪಿಸ್ಟ್ ಗಳಿಗೆ ನಿರ್ಭೀತರಾಗಿ ತಮ್ಮ ಕೃತ್ಯಗಳನ್ನು ಮುಂದುವರಿಸಿರುತ್ತಿರುವ ಘಟನೆಗಳು ದೇಶದ ವಿವಿಧೆಡೆ ನಡೆಯುತ್ತಲೆ ಇವೆ.
ರಾಜಧಾನಿ ದೆಹಲಿ ಸಮೀಪದ ಗ್ರೇಟರ್ ನೋಯ್ಡದಲ್ಲಿ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಆಕೆಯ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಆಕೆಯ ಸಂಬಂಧಿ ಮತ್ತು ಶಾಲಾ ಗೆಳೆಯನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.ವಿದ್ಯಾರ್ಥಿಯನ್ನು ಕಾರಿನಲ್ಲಿ ಅಪಹರಿಸಿ, ಅತ್ಯಾಚಾರ ನಡೆಸಲಾಗಿದೆ. ನಂತರ ಗಲ್ಗೋಟಿಯಾ ಕಾಲೇಜು ಬಳಿ ಪ್ರಜ್ಞಾ ಇಲ್ಲದ ಸ್ಥಿತಿಯಲ್ಲಿದ್ದ ಪತ್ತೆಯಾಗಿದ್ದಾಳೆ. ಈ ವಿಷಯ ಮೂವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ದುಷ್ಕರ್ಮಿಗಳಿಗಾಗಿ ಶೋಧ ಮುಂದುವರಿಸುತ್ತಿದ್ದಾರೆ.
Comments