ವಿಜೇಯಂದ್ರಗೆ ತಪ್ಪಿದ ಟಿಕೆಟ್- ಅಭಿಮಾನಿ ಆತ್ಮಹತ್ಯೆ
ವರುಣಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ವೈ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಮನನೊಂದ ವಿಜಯೇಂದ್ರ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ವರಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಗೂರಿನಲ್ಲಿ ನಡೆದಿದೆ.
ಸರಗೂರಿನ ಬಸವಣ್ಣ ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯಾಗಿದ್ದು ವರುಣಾ ವಿಧಾನಸಭಾ ಕ್ಷೇತ್ರದಿಂದ ತಮ್ಮ ನೆಚ್ಚಿನ ನಾಯಕನಿಗೆ ಟಿಕೆಟ್ ತಪ್ಪಿದ್ದ ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಬಸವಣ್ಣ ಕಳೆದ ಮೂರು ದಿವಸದಿಂದ ಯಾರ ಬಳಿಯು ಮಾತನಾಡದೇ ಏಕಾಂಗಿಯಾಗಿ ಇದ್ದ ಎನ್ನಲಾಗಿದೆ. ಈ ಬಗ್ಗೆ ಬಸವಣ್ಣನ ಆಪ್ತರು ಕರೆದು ಬುದ್ದಿ ಹೇಳಿದರು ಕೂಡ ಬಸವಣ್ಣ ಬೇಸರಗೊಂಡು ನೇಣಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.. ಘಟನೆ ನಡೆದ ಸ್ಥಳಕ್ಕೆ ಹೆಚ್.ಡಿ ಕೋಟೆ ಪೊಲೀಸ್ ಠಾಣಾ ಸಿಬ್ಬಂದಿ ಆಗಮಿಸಿ ವಿಚಾರಣೆಯನ್ನು ಕೈಗೊಂಡಿದ್ದಾರೆ.
Comments