ದಿನೇಶ್ ಗುಂಡೂರಾವ್ ವಿರುದ್ಧ ಎಫ್ ಐ ಆರ್ ದಾಖಲು

ರಾಜ್ಯ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಚುನಾವಣಾ ಆಯೋಗದ ಅನುಮತಿ ಪಡೆಯದೆ ಕರಪತ್ರ ಹಂಚುತ್ತಿದ್ದಂತಹ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ದಿನೇಶ್ ಗುಂಡೂರಾವ್ ಮತ್ತು ಅವರ ಬೆಂಬಲಿಗರ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ದಿನೇಶ್ ಗುಂಡೂರಾವ್ ಅವರು ಏ.22 ರಂದು ಸುಮಾರು ಬೆಳಗ್ಗೆ 10 ಗಂಟೆಗೆ ಆಶಾ ಫುಡ್ ಕ್ಯಾಂಪ್ ನಿಂದ ಮಲ್ಲೇಶ್ವರ 7ನೇ ಕ್ರಾಸ್‌ವರೆಗೂ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ವೇಳೆ ಮತಯಾಚಿಸಲು ಭಿತ್ತಿ ಪತ್ರಗಳನ್ನು ಹಂಚುತ್ತಿದ್ದರು ಎಂದು ಆರೋಪಿಸಿ ಫ್ಲೈಯಿಂಗ್ ಸ್ಕ್ವಾಡ್ ಕೆ.ಎ.ಶಾಂತರಾಜು ಅವರು ಪೊಲೀಸರಿಗೆ ದೂರು ನೀಡಿದ್ದರು. ಕರಪತ್ರ ಹಂಚಲು ಚುನಾವಣಾ ಆಯೋಗದಿಂದ ಯಾವುದೆ ಅನುಮತಿ ಪಡೆಯದೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಸಿದ್ದಾರೆ ಎಂದು ತಿಳಿಸಿದ್ದಾರೆ. ದೂರು ಸ್ವೀಕರಿಸಿರುವ ಮಲ್ಲೇಶ್ವರಂ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಮೇ ೩ರಂದು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮಾಡುತ್ತಿದ್ದಾರೆ.
Comments