ಸಿಎಂ ಕುಮಾರಸ್ವಾಮಿಗೆ ನಟ ದರ್ಶನ್ ಹೆಸರಿನಲ್ಲಿ ಅವಹೇಳನಕಾರಿ ಪೋಸ್ಟ್..!

ಇತ್ತಿಚಿಗೆ ಸಾಮಾಜಿಕ ಜಾಲತಾಣಗಳು ಎಷ್ಟು ಒಳ್ಳೆಯದೋ ಅಷ್ಟೆ ಕೆಟ್ಟದ್ದು ಕೂಡ. ಅದನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಅದರ ಮೇಲೆ ಎಲ್ಲವೂ ನಿಂತಿರುತ್ತದೆ. ಸೋಷಿಯಲ್ ಮೀಡಿಯಾವನ್ನು ಅನೇಕರು ದುರ್ಬಳಕೆ ಮಾಡಿಕೊಳ್ಳುತ್ತಿರುವ ಘಟನೆಗಳು ಪದೇ ಪದೇ ನಡೆಯುತ್ತಲೇ ಇವೆ. ಈಗ ನಟ ದರ್ಶನ್ ಅವರ ಹೆಸರಿನಲ್ಲಿ ಸಿಎಂ ಕುಮಾರಸ್ವಾಮಿಗೆ ಅವಹೇಳನಕಾರಿ ಪೋಸ್ಟ್ ಒಂದನ್ನು ಮಾಡಿದ್ದಾರೆ.
ಯಾರೋ ಕಿಡಿಗೇಡಿಗಳು ನಟ ದರ್ಶನ್ ತೂಗುದೀಪ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯೊಂದನ್ನು ತೆರೆದಿದ್ದಾರೆ. ಆ ಖಾತೆಯ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಸರಣಿ ಪೋಸ್ಟ್ ಗಳನ್ನು ಹಾಕುತ್ತಿದ್ದರು. ಕುಮಾರಸ್ವಾಮಿ ಬಗ್ಗೆ ಕೆಟ್ಟದಾಗಿ ಬರೆದು, ಅವರ ಫೋಟೋಗಳನ್ನು ಕೆಟ್ಟದಾಗಿ ಬಿಂಬಿಸುತ್ತಿದ್ದರು. ಇದನ್ನು ಗಮನಿಸಿದ ಕುಮಾರಸ್ವಾಮಿ ಅಭಿಮಾನಿ ಸಂಘಗಳು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ಜೊತೆಗೆ ದರ್ಶನ್ ಹೆಸರಿನ ಮೂಲಕ ಸಿಎಂ ಕುಮಾರಸ್ವಾಮಿ ಅವರಿಗೆ ಅವಹೇಳನ ಮಾಡಿದ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ರಿಗೆ ದೂರು ಕೊಟ್ಟಿದ್ದಾರೆ. ದೂರು ಸ್ವೀಕರಿಸಿರುವ ಸುನೀಲ್ ಕುಮಾರ್ ಫೇಸ್ ಬುಕ್ ಅನ್ನು ದುರ್ಬಳಕೆ ಮಾಡಿದವರ ವಿರುದ್ಧ ಸೂಕ್ತ ಕ್ರಮವನ್ನು ಕೈ ಕೊಳ್ಳುವುದಾಗಿ ತಿಳಿಸಿದ್ದಾರೆ.
Comments