ಸಾಲಮನ್ನಾ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ರೈತ..!

ಮೈತ್ರಿ ಸರ್ಕಾರದ ನೂತನ ಬಜೆಟ್ ನಲ್ಲಿ ರೈತರ ಸಾಲಮನ್ನಾ ಘೋಷಣೆ ಬಳಿಕವೂ ಮುದ್ದೇಬಿಹಾಳ ತಾಲೂಕಿನ ಆಲೂರು ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
56 ವರ್ಷದ ಸಂಗಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಲಬಾಧೆ ತಾಳಲಾರದೆ ಗುರುವಾರ ಸಂಜೆ ತಮ್ಮ ಜಮೀನಿನಲ್ಲೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತೊಗರಿ ಬೆಳೆ ಬೆಳೆಯಲು ರೈತ ಸಂಗಣ್ಣ, ಕೈಗಡ ರೂಪದಲ್ಲಿ 2 ಲಕ್ಷ ರೂಪಾಯಿ ಹಾಗೂ ವಿವಿಧ ಬ್ಯಾಂಕ್‍ಗಳಲ್ಲಿ 1.50 ಲಕ್ಷ್ಮ ರೂಪಾಯಿ ಸೇರಿದಂತೆ ಒಟ್ಟು 3.50 ಲಕ್ಷ ರೂಪಾಯಿ ಸಾಲವನ್ನು ಮಾಡಿಕೊಂಡಿದ್ದರು. ಆದರೆ ಇದೀಗ ಏಕಾಏಕಿ ತೊಗರಿ ಬೆಳೆ ಕೈಕೊಟ್ಟಿದ್ದರಿಂದ ಸಾಲ ಮರುಪಾವತಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆಯನ್ನು ನಡೆಸಿ, ಘಟನೆಯ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments