ಶಾಲೆಯಲ್ಲಿಯೇ ವಿದ್ಯಾರ್ಥಿನಿ ನೇಣಿಗೆ ಶರಣು..!
ಶಾಲೆಯಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೋಡಿಮಾರನಹಳ್ಳಿಯಲ್ಲಿ ನಡೆದಿದೆ.
ವಿದ್ಯಾನಿಕೇತನ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದಂತಹಾ ಸಂಗೀತಾ (14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾರೆ.. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುತ್ತಿದ್ದ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ರುಕಿರುಕುಳ ಕೊಡುತ್ತಿದ್ದರು ಎಂಬ ಆರೋಪವು ಕೇಳಿಬಂದಿದೆ. ಶಿಕ್ಷಕರ ಕಿರುಕುಳ ತಾಳಲಾರದೆ ಶಾಲೆಯಲ್ಲಿಯೇ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿನಿಯ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಶಿಕ್ಷಕರು ಹಾಗೂ ಶಾಲೆಯ ಆಡಳಿತ ಮಂಡಳಿಯವರು ಕಾಣೆಯಾಗಿದ್ದಾರೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Comments