ಶೀರೂರು ಶ್ರೀ ಸಾವು ಪ್ರಕರಣದ ಹಿನ್ನಲೆಯಲ್ಲಿ ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು..!

ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಬ್ರಹ್ಮಾವರ ಮೂಲದ ರಮ್ಯಾ ಎಂಬುವವರನ್ನು ಪೊಲೀಸರು ವಶಕ್ಕೆ ತೆಗೆದು ಎನ್ನಲಾಗಿದೆ.
ರಮ್ಯಾ ಅವರು ಕಳೆದ ನಾಲ್ಕು ವರ್ಷಗಳಿಂದಲೂ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಶ್ರೀಗಳಿಗೆ ಫಲಾಹಾರ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಷ್ಟೆ ಅಲ್ಲದೆ ರಮ್ಯಾ ಅವರು ಮೂಲ ಮಠದ ನಿರ್ಮಾಣ ಕಾಮಗಾರಿಯ ಉಸ್ತುವಾರಿಯನ್ನು ಕೂಡ ಇವರೇ ನಿರ್ವಹಿಸುತ್ತಿದ್ದರು. ಜೊತೆಗೆ ಕಾಮಗಾರಿಗೆ ಸಂಬಂಧಿಸಿದಂತೆ ಎಲ್ಲಾ ಕೆಲಸದವರಿಗೆ ರಮ್ಯಾ ಅವರೇ ಸಂಬಳವನ್ನೂ ನೀಡುತ್ತಿದ್ದರು ಎಂದೂ ತಿಳಿದು ಬಂದಿದೆ. ರಮ್ಯಾ ಅವರು ಏನಿಲ್ಲಾ ಅಂದರೂ ವಾರಕ್ಕೆ ಎರಡರಿಂದ ಮೂರು ಬಾರಿ ಮಠಕ್ಕೆ ಬಂದು ಹೋಗುತ್ತಿದ್ದರು. ಈ ಹಿನ್ನೆಲೆಯಲ್ಲಿ ರಮ್ಯಾ ಅವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Comments