ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ರಾಜ್ಯ ವಿಧಾನ ಸಭಾ ಚುನಾವಣೆ ಫಲಿತಾಂಶ ಬಂದ ಮೇಲೆ ರಚನೆಯಾದ ಸಮ್ಮಿಶ್ರ ಸರ್ಕಾರದ ಮೊದಲ ಹೆಜ್ಜೆಯಾಗಿದ್ದು, ರೈತರ ಸಾಲ ಮನ್ನಾ.. ಇದರ ಬಗ್ಗೆ ಸಾಕಷ್ಟು ಚರ್ಚೆಗಳು ಆದರೂ ಕೂಡ ಕೊನೆಗೆ ಸಾಲಮನ್ನಾ ಎಂದು ಸಿಎಂ ಕುಮಾರಸ್ವಾಮಿಯವರು ತಿಳಿಸಿದರು.
ಆದರೆ ಇದರ ಬೆನ್ನಲ್ಲೆ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಕುಂಚೂರು ಗ್ರಾಮದದಲ್ಲಿ ನಡೆದಿದೆ. ಶ್ರೀನಿವಾಸ್ ಚಕ್ರಸಾಲಿ (36) ಮೃತ ರೈತರಾಗಿದ್ದಾರೆ. ಇವರು ಆರು ಎಕೆರೆ ಜಮೀನನ್ನು ಹೊಂದಿದ್ದರು. ಶ್ರೀನಿವಾಸ್ ಬ್ಯಾಂಕ್‍ನಿಂದ ಹಾಗೂ ಕೈಸಾಲ ಅಂತಾ ಸುಮಾರು ಏಳು ಲಕ್ಷ ರೂಪಾಯಿ ಸಾಲವನ್ನು ಮಾಡಿಕೊಂಡಿದ್ದರು. ಈ ಬಾರಿ ಹತ್ತಿ ಹಾಗೂ ಮೆಕ್ಕೆಜೋಳದ ಬೆಳೆಗಳು ಕೈಕೊಟ್ಟಿದ್ದರಿಂದ ತ್ರೀವಾ ನಷ್ಟಕ್ಕೆ ಒಳಗಾಗಿದ್ದರು. ಇದರ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವು ದಾಖಲಾಗಿದೆ.
Comments