ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ..!
ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸದ್ಯ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡವರ ವಿರುದ್ಧ ದೂರನ್ನು ದಾಖಲಿಸಿದ್ದಾರೆ.
ಯಾರೋ ಕಿಡಿಗೇಡಿಗಳು ತಮ್ಮ ಹೆಸರು ಮತ್ತು ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು vijayalakshmi minda jalagara ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು ಅಸಂಬದ್ಧವಾದ ಮತ್ತು ಅಶ್ಲೀಲವಾದ ಪದಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ತಮ್ಮ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ'. ಈ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೈಬರ್ ಪೊಲೀಸ್ ಠಾಣೆಯಲ್ಲಿ ವಿಜಯಲಕ್ಷ್ಮಿ ದೂರನ್ನು ದಾಖಲಿಸಿದ್ದಾರೆ. ಇನ್ನು ದೂರಿನ ಅನ್ವಯ ಸೈಬರ್ ಪೊಲೀಸರು ಐಪಿಸಿ ಸೆಕ್ಷನ್ 354(D),354A(1)(iv),(505)(507)(420) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ.
Comments