ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಆರೋಗ್ಯದಲ್ಲಿ ಏರುಪೇರು..!
ಜಯಲಲಿತಾ ಅವರ ಆಪ್ತೆ ಆಗಿದ್ದ ಶಶಿಕಲಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವುದು ಎಲ್ಲರಿಗೂ ತಿಳಿದೆ ಇದೆ. ಇದೀಗ ಶಶಿಕಲಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ಶುಗರ್ ಬಿಪಿ ಹೆಚ್ಚಳ ಹಿನ್ನೆಲೆಯಲ್ಲಿ ಜೈಲು ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಶಶಿಕಲಾ ಅವರಿಗೆ ಚಿಕಿತ್ಸೆಯನ್ನು ನೀಡಲಾಗಿದೆ. ಪದೇಪದೆ ಶುಗರ್, ಬಿಪಿ ಕಾಣಿಸಿಕೊಳ್ಳುತ್ತಿದ್ದು ಕಳೆದ ಆರು ತಿಂಗಳ ಹಿಂದೆ ಕೂಡ ಅತಿಯಾದ ಶುಗರ್ ಕಾಣಿಸಿಕೊಂಡಿತ್ತು. ಒಂದು ವೇಳೆ ಆರೋಗ್ಯದಲ್ಲಿ ಚೇತರಿಕೆ ಕಾಣದಿದ್ದರೆ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಶಿಪ್ಟ್ ಮಾಡುವ ಸಾಧ್ಯತೆ ಇದೆ ಎಂದು ಪರಪ್ಪನ ಅಗ್ರಹಾರ ಜೈಲು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ ಎಂದು ಹೇಳಲಾಗುತ್ತದೆ.
Comments