ಅಪ್ಪನ ಆಸ್ಪತ್ರೆ ಬಿಲ್ ಕಟ್ಟಲಾಗದೇ ಸಾವಿಗೆ ಶರಣಾದ ಮಗ..!
ಅಪ್ಪಾ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಅಪ್ಪನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.. ಆದರೆ ಅಪ್ಪನ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದೇ ನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ಆಸ್ಟತ್ರೆಯಲ್ಲಿದ್ದ ಅಪ್ಪ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ.
ಬೂಕನಕೆರೆ ಗ್ರಾಮದ ನಿವಾಸಿ ಈರಣ್ಣ ಶೆಟ್ಟಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯತ್ತಿದ್ದರು. ಆಸ್ಪತ್ರೆಯಲ್ಲಿ 2 ಲಕ್ಷ ರೂ. ಬಿಲ್ ಆಗಿತ್ತು. ಅಪ್ಪನ ಚಿಕಿತ್ಸಾ ವೆಚ್ಚ ಕಂಡು ಕಂಗಲಾದ ಮಗ ಮಂಜು(25) ಅಷ್ಟು ಹಣವನ್ನು ಕಟ್ಟಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಮಗ ಆತ್ಮಹತ್ಯೆಗೆ ಶರಣಾದ ವಿಷಯ ತಿಳಿಯುತ್ತಿದ್ದಂತೆಯೇ ಅಪ್ಪ ಈರಣ್ಣ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಕೆ.ಆರ್. ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Comments