ರಸ್ತೆ ಅಪಘಾತದಲ್ಲಿ ಬಾಲಿವುಡ್ ಸ್ಟಂಟ್ ಮಾಸ್ಟರ್ ಸಾವು

ರಸ್ತೆ ಅಪಘಾತದಲ್ಲಿ ಬಾಲಿವುಡ್ ಸ್ಟಂಟ್ ಮಾಸ್ಟರ್ ಸತ್ತರ್ ಅಹಮದ್ ಖಾನ್ (33) ಸಾವನ್ನಪ್ಪಿದ್ದಾರೆ. ಹುಣಸೂರು ತಾಲ್ಲೂಕಿನ ಯಶೋದಾಪುರ ಗ್ರಾಮದ ಬಳಿ ಮಂಗಳವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ಕಾರಿನ ಚಾಲಕ, ಬೆಂಗಳೂರಿನ ಉಮೇಶ್ ಮತ್ತು ಅರುಣ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು ಅರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಾಲಿವುಡ್ ಚಿತ್ರತಂಡವೊಂದು 'ಉತ್ಕರ್ಷ' ಎಂಬ ಸಿನಿಮಾ ಚಿತ್ರೀಕರಣಕ್ಕಾಗಿ ಬೆಂಗಳೂರಿನಿಂದ ಮಡಿಕೇರಿಗೆ ಹೋಗುವ ಸಂದರ್ಭದಲ್ಲಿ ಯಶೋದಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾಡುಹಂದಿ ಅಡ್ಡಬಂದ ಪರಿಣಾಮ ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾರೆ. ಆದರೆ, ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಡಿವೈಡರ್’ಗೆ ಡಿಕ್ಕಿ ಹೊಡೆದಿದೆ. ಬಾಲಿವುಡ್ ಸ್ಟಂಟ್ ಮಾಸ್ಟರ್ ಸತ್ತರ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಪೂವಯ್ಯ ತಿಳಿಸಿದ್ದಾರೆ. ಇನ್ನೂ ಈ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Comments