ಬಿಎಂಟಿಸಿ ಬಸ್ ಡಿಕ್ಕಿ ಹಿನ್ನಲೆ : ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಮೈಸೂರು ರಸ್ತೆ ಗೋಪಾಲನ್ ಮಾಲ್ ಬಳಿ ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ರಸ್ತೆಯ ಮೂಲಕ ಮೆಜೆಸ್ಟಿಕ್’ಗೆ ಬಸ್ ಹೋಗುತ್ತಿತ್ತು, ಈ ವೇಳೆ ಬ್ರೇಕ್ ಫೇಲ್ ಆಗಿ ಬಸ್ ಪಾದಚಾರಿ ಮಾರ್ಗದ ಮೇಲೆ ನುಗ್ಗಿದೆ.
ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದ ನಾಲ್ವರಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರಲ್ಲಿ ಓರ್ವ ವಿದ್ಯಾರ್ಥಿಯನ್ನು ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ಮತ್ತೋರ್ವನ ಹೆಸರು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದೆ.. ಘಟನಾ ಸ್ಥಳಕ್ಕೆ ಪೊಲೀಸರು ಬಂದ ದೂರು ದಾಖಲು ಮಾಡಿಕೊಂಡಿದ್ದಾರೆ.
Comments