ಹಾಡುಹಗಲೇ ಜೆಡಿಎಸ್ ಕಾರ್ಯಕರ್ತನ ಬರ್ಬರ ಹತ್ಯೆ..!!

ಸೋಮವಾರ ಮಧ್ಯಾಹ್ನ ಹಾಡಹಗಲೇ ಮದ್ದೂರಿನ ಪ್ರವಾಸಿ ಮಂದಿರ ಆವರಣದಲ್ಲಿ ಜೆಡಿಎಸ್ ಮುಖಂಡನ ಕತ್ತು ಕೊಯ್ದು ವ್ಯಕ್ತಿಯ ಕೊಲೆ ಮಾಡಲಾಗಿದೆ. ಜಿಲ್ಲಾ ಪಂಚಾಯತ್ನ ಮಾಜಿ ಅಧ್ಯಕ್ಷೆ ಲಲಿತ ಅವರ ಪತಿ, ಜೆಡಿಎಸ್ ಮುಖಂಡ ಪ್ರಕಾಶ್ ಕೊಲೆಯಾದ ವ್ಯಕ್ತಿಯಾಗಿದ್ದಾರೆ.. ಕಾರಿನಲ್ಲಿ ಕತ್ತು ಕೊಯ್ದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಪ್ರವಾಸಿ ಮಂದಿರ ಆವರಣದಲ್ಲಿ ನಿಂತಿದ್ದ ಕಾರಿನಲ್ಲಿ ಪ್ರಕಾಶ್ ಅವರ ಶವ ಪತ್ತೆಯಾಗಿದೆ ಎನ್ನಲಾಗಿದೆ.
ರಾಜಕೀಯದಲ್ಲಿ ತೊಡಗಿದ್ದ ಪ್ರಕಾಶ್ ಅವರನ್ನು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಿರಬಹುದೆಂದು ಹೇಳಲಾಗುತ್ತಿದೆ. ಮದ್ದೂರಿನಲ್ಲಿ ಹಾಡುಹಗಲೇ ನಡೆದಿರುವ ಕೊಲೆ ಪ್ರಕರಣ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಘಾತವಾಗಿದೆ ಎಂದು ಹೇಳಲಾಗುತ್ತಿದೆ.ಕೊಲೆಯಾದ ಪ್ರಕಾಶ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಕಾನೂನು ಪ್ರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆಯನ್ನು ಕೊಟ್ಟಿದ್ದೇನೆ ಎಂದರು.. .
Comments