ಬಿಜೆಪಿ ಮುಖಂಡನ ಬರ್ಬರ ಹತ್ಯೆ..!! ಆರೋಪಿ ಎಸ್ಕೇಪ್..!!!
ಇತ್ತಿಚಿಗೆ ರಾಜಕಾರಣಿಗಳ ಹತ್ಯೆಗೆ ಸಂಚು ರೂಪಿಸಿ ಕೊಲೆ ಮಾಡುತ್ತಿರುವುದು ಹೆಚ್ಚಾಗುತ್ತಿದೆ. ಇತ್ತಿಚಿಗಷ್ಟೆ ಜೆಡಿಎಸ್ ಪಕ್ಷದವರನ್ನು ಹತ್ಯೆ ಮಾಡಲಾಗಿತ್ತು.. ಇದೀಗ ಇದರ ನಡುವೆ ಸ್ಥಳೀಯ ಬಿಜೆಪಿ ಮುಖಂಡನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಔಷಧಿ ಕೇಳುವ ನೆಪದಲ್ಲಿ ಬಂದ ವ್ಯಕ್ತಿ ಅವರ ಮೇಲೆ ಏಕಾಏಕಿ ಗುಂಡಿನ ದಾಳಿಯನ್ನು ನಡೆಸಿದ್ದಾನೆ.
ಈತ ಮೆಡಿಕಲ್ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ತನ್ನ ಔಷಧಿ ಅಂಗಡಿಯಲ್ಲಿ ಕುಳಿತದ್ದ ಬೈಜು ಪ್ರಸಾದ್ ಗುಪ್ತಾ ಎಂಬುವವರ ಮೇಲೆ ಗುಂಡಿನ ದಾಳಿ ನಡಿದಿದ್ದು, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆದಲ್ಲೆ ಕೊನೆಯುಸಿರೆಳಿದ್ದಾರೆ. ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ. ಆರೋಪಿಯು ಸಿಕ್ಕ ಮೇಲೆ ಮುಂದಿನ ತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Comments