ಬಿಜೆಪಿ ನಾಯಕನ ಭೀಕರ ಹತ್ಯೆ..!!
ಇತ್ತಿಚಿಗೆ ಕೊಲೆಯಾಗುವವರ ಸಂಖ್ಯೆ ಜಾಸ್ತಿಯಾಗಿ ಬಿಟ್ಟಿದೆ… ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲೂರು ಗ್ರಾಮದ ಬಳಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಸಂತಿ ಬಸ್ತವಾಡ ಗ್ರಾಮದ ನಿವಾಸಿ ನಾಗಪ್ಪಾ ಜಿಡ್ಡನ್ನವರ ಕೊಲೆಯಾಗಿರುವ ದುರ್ವೈವಿಯಾಗಿದ್ದಾರೆ. ಇವರು ಬಿಜೆಪಿ ನಾಯಕರಾಗಿದ್ದರು.. ಗುರುವಾರ ತಡರಾತ್ರಿ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಬೆಳಗಾವಿಯ ಬೈಲೂರು ಗ್ರಾಮದ ಬಳಿ ನಾಗಪ್ಪ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿ ರಸ್ತೆ ಬದಿ ಬೀಸಾಡಿದ್ದಾರೆ ಎಂದು ಶಂಕಿಸಲಾಗಿದೆ. ನಾಗಪ್ಪ ಅವರನ್ನು ಕೊಲೆ ಮಾಡಿದ ಆರೋಪಿಗಳ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ
Comments