ಜವರಾಯನ ಅಟ್ಟಹಾಸ..!! ನಂದಿ ಬೆಟ್ಟ ನೋಡಲು ಹೋಗಿ ಮಸಣ ಸೇರಿದರು…

ಬೆಳ್ಳಂಬೆಳ್ಳಗೆ ಜವರಾಯ ತನ್ನ ಅಟ್ಟಹಾಸವನ್ನು ಮೆರೆದಿದ್ದಾನೆ. ಕಾರು ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಹಂದ್ರಹಳ್ಳಿಯಲ್ಲಿ ನಡೆದಿದೆ…ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಐವರಿಗೆ ತೀವ್ರ ಗಾಯವಾಗಿದೆ. ದೇವನಹಳ್ಳಿ ತಾಲೂಕಿನ ಹಂದ್ರಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ.
ನಂದಿಬೆಟ್ಟಕ್ಕೆ ಒಂಬತ್ತು ಜನರು ಆವಲಹಳ್ಳಿಯಿಂದ ಕಾರಿನಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ಈ ದುರಂತ ಸಂಭವಿಸಿದ್ದು ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿದ್ದಾರೆ. ರಮೇಶ್ (30), ಮಂಜುನಾಥ್ (26), ಅಶೋಕ್ ರೆಡ್ಡಿ (26), ಗೌರೀಶ್ (23) ಮೃತ ದುರ್ದೈವಿಗಳಾಗಿದ್ದು, ಮೃತರೆಲ್ಲರು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ನಕ್ಕಲಪಲ್ಲಿ ಗ್ರಾಮದವರಾಗಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೊಸಕೋಟೆ ಮತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ನಂದಿಬೆಟ್ಟವನ್ನು ನೋಡಲು ನೋದವರು ಪಾಪ ಶಿವನ ಪಾದವನ್ನು ಸೇರಿಕೊಂಡಿದ್ದಾರೆ.
Comments