ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಿದ ಪೊಲೀಸರು

ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಪೊಲೀಸರು ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಿದ್ದಾರೆ.
ಶುಕ್ರವಾರ ಬೆಳಂಬೆಳಗ್ಗೆ 3 ಗಂಟೆ ಸುಮಾರಿಗೆ ಬಂಧಿತ ಎಲ್ಲ ನಾಲ್ಕು ಆರೋಪಿಗಳನ್ನು ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ನಡೆಸಿದ ಜಾಗದ ಬಗ್ಗೆ ಮಹಜರು ಪಡೆಯಲು ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ಕರೆತಂದಿದ್ದರು. ತನಿಖೆ ದೃಷ್ಟಿಯಿಂದ ಕೃತ್ಯ ಸಂಭವಿಸಿದನ್ನು ಪುನಃ ಸೃಷ್ಟಿ ಮಾಡುವ ಕೆಲಸದಲ್ಲಿ ಪೊಲೀಸರು ನಿರತರಾಗಿದ್ದರು. ಇದ್ದಕ್ಕಿದ್ದಂತೆ ಆರೋಪಿಗಳು ಪೊಲೀಸರ ಕೈಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಂಡಿದ್ದಾರೆ. ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗೋಸ್ಕರ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅಂತಿಮವಾಗಿ ನಾಲ್ವರು ಆರೋಪಿಗಳು ನೆಲಕ್ಕೆ ಉರುಳಿದ್ದಾರೆ. ಆರೋಪಿಗಳನ್ನು ಎನ್‌ಕೌಂಟರ್ ಮಾಡಿದಾಗ ಸಮಯ 3.30 ಆಗಿತ್ತು.ಆರೋಪಿಗಳನ್ನು ಬೇಟೆಯಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
Comments