ಪಾಕ್ ಮಾಜಿ ಅಧ್ಯಕ್ಷ ಮುಷರಫ್‍ಗೆ ಗಲ್ಲುಶಿಕ್ಷೆ
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ವಿರುದ್ಧ 2013ರಲ್ಲಿ ಸಲ್ಲಿಕೆಯಾಗಿದ್ದ ದೇಶದ್ರೋಹ ಪ್ರಕರಣದ ತೀರ್ಪು ಇಂದು ಪ್ರಕಟಿಸಿದೆ. ಈ ಪ್ರಕರಣ ಸಂಬಂಧ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ದೇಶದ್ರೋಹ ಆರೋಪದಡಿ ಗಲ್ಲು ಶಿಕ್ಷೆ ವಿಧಿಸಿದೆ.
ಪೇಶಾವರ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಶೇಷ ನ್ಯಾಯಮಂಡಳಿಯ ತ್ರಿಸದಸ್ಯ ಪೀಠ 2:1 ಅನುಪಾತದಲ್ಲಿ ಗಲ್ಲು ಶಿಕ್ಷೆಯ ತೀರ್ಪನ್ನು ಪ್ರಕಟಿಸಿದೆ. ಈ ಮೂಲಕ ಪಾಕಿಸ್ತಾನದ ಇತಿಹಾಸದಲ್ಲಿ ಮೊದಲ ಬಾರಿಗೆ ಗಲ್ಲು ಶಿಕ್ಷೆಗೆ ಒಳಗಾದ ಅಧ್ಯಕ್ಷ ಎಂಬ ಕುಖ್ಯಾತಿಗೆ ಮುಷರಫ್ ಪಾತ್ರರಾಗಿದ್ದಾರೆ.
ಸದ್ಯ ದುಬೈನಲ್ಲಿ ನೆಲೆಸಿರುವ ಮುಷರಫ್ 1999 ರಿಂದ 2008ರವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ನಂತರ ಬಂದ ನವಾಜ್ ಷರೀಫ್ ನೇತೃತ್ವದ ಸರ್ಕಾರ, ಮುಷರಫ್ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ 2013ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. 2014ರ ಮಾರ್ಚ್ 31ರಂದು ಅವರ ವಿರುದ್ಧ ದೋಷಾರೋಪ ಹೊರಿಸಲಾಗಿತ್ತು.
Comments